ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಜೀ ಅವರು ಯಾರನ್ನು ಗುರುತಿಸುವ ಸ್ಥಿತಿಯಲಿಲ್ಲ. ಆದರೆ, ಅವರು ನೆಟ್ಟ ಮರ ಹೆಮ್ಮರವಾಗಿ ಬೆಳೆದಿದೆ. ಪ್ರಧಾನಿ ಮೋದಿ ಅವರ ಕಾರ್ಯವೈಖರಿಯನ್ನು ನೋಡಬೇಕಿತ್ತು. ಆದರೆ, ಅಟಲ್ಜೀ ಅವರು ಆ ಸ್ಥಿತಿಯಲಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಅವರು ಭಾವುಕರಾದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿನವಾಗಿ ಆಚರಿಸಲಾಯಿತು.