ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಯನಾ ಹಾಗೂ ಪಾರ್ಟ್ನರ್ ಕಿರಣ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರೇಮಿಗಳಿಗೆ ರೂಮ್ ವ್ಯವಸ್ಥೆ ಮಾಡಿಕೊಟ್ಟು ಇದೀಗ ಅವರೇ ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷ ಹಣ ನೀಡುವಂತೆ ಬ್ಲ್ಯಾಕ್ ಮೇಲ್ಗೆ ಇಳಿದಿದ್ದರು.