ಮಂಗಳೂರು: ಯುವತಿಯೊಬ್ಬಳಿಗೆ ಮದುವೆಯಾಗುವ ಅಮಿಷವೊಡ್ಡಿ ಅತ್ಯಾಚಾರವೆಸಗಿ ಆಕೆಯಿಂದ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ನಿವಾಸಿ ಶಾನ್ ನವಾಸ್ (36) ಬಂಧಿತ ಆರೋಪಿ. ಮೂಡುಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಹಣವನ್ನು ಸುಲಿಗೆ ಮಾಡಿದ್ದ, ಇಷ್ಟೇ ಅಲ್ಲದೆ ಆಕೆಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್ನಲ್ಲಿ ಚಿತ್ರಿಕರಣ ಮಾಡಿದ್ದ. ನಂತರ