ಲಾಡ್ಜ್ ನಲ್ಲಿ ಬಿಎಂಟಿಸಿ ಚಾಲಕನ ಅನುಮಾನಾಸ್ಪದ ಸಾವು ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎಂಬ ಅನುಮಾನಕ್ಕೆ ತೆರೆ ಬಿದ್ದಿದ್ದು, ವಿವಾಹಿತಳ ಹಿಂದೆ ಬಿದ್ದ ಚಾಲಕ ಪುಟ್ಟೇಗೌಡ ಆಕೆ ನಿರಾಕರಿಸಿದಾಗ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದು ಕೆಂಗೇರಿ ಠಾಣಾ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಚೆನ್ನಪಟ್ಟಣ ಮೂಲದ ಪುಟ್ಟೇಗೌಡನಿಗೆ ಕೇವಲ ಆರು ತಿಂಗಳ ಹಿಂದೆಯಷ್ಟೇ ವಿವಾಹಿತ ಮಹಿಳೆಯೊಬ್ಬಳ ಪರಿಚಯವಾಗಿತ್ತು. ತಮ್ಮ ಊರಿನ ಪಕ್ಕದ ಊರಿನವಳೇ ಆಗಿದ್ದ ಮಹಿಳೆಯೊಂದಿಗೆ ಸ್ನೇಹ ಬಳಿಕ ಸಂಬಂಧಕ್ಕೆ ತಿರುಗಿತ್ತು. ಇತ್ತೀಚೆಗೆ