ಪಕ್ಕದ ಶ್ರೀಲಂಕಾದ ಕೊಲಂಬೋನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ಕೇರಳ, ತಮಿಳುನಾಡು ರಾಜ್ಯಗಳಿಗೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆ ಚಾಮರಾಜನಗರದಲ್ಲೀಗ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ವ್ಯಾಪಕ ಬಂದೋ ಬಸ್ತ್ ಮಾಡಲಾಗಿದೆ. ಶ್ವಾನ ದಳ ಮತ್ತು ಬಾಂಬ್ ತಪಾಸಣಾ ದಳ ಜಿಲ್ಲೆಯ ಜನ ಸಂದಣಿ ಪ್ರದೇಶಗಳಾದ, ಬಸ್ ನಿಲ್ದಾಣ, ರೈಲು ನಿಲ್ದಾಣ, ಜಿಲ್ಲಾಡಳಿತ ಭವನ, ಜಿಲ್ಲಾ ನ್ಯಾಯಾಲಯದ