ಬೆಂಗಳೂರು: ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆಯೊಂದು ಬಂದಿದೆ.ಕೆಲವು ದಿನಗಳ ಹಿಂದೆ ಶಾಲೆಗಳಿಗೆ ಬಾಂಬ್ ಹಾಕುವುದಾಗಿ ಅಜ್ಞಾತ ವ್ಯಕ್ತಿಯಿಂದ ಈಮೇಲ್ ಬಂದಿತ್ತು. ಇದರಿಂದ ಪೋಷಕರು ಆತಂಕಕ್ಕೀಡಾಗಿದ್ದರು. ಅದಾದ ಬಳಿಕ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬೆದರಿಕೆ ಬಂದಿತ್ತು. ಇದೀಗ ಅಂತಹದ್ದೇ ಮತ್ತೊಂದು ಬಾಂಬ್ ಬೆದರಿಕೆ ಬಂದಿದೆ. ಮುಂಬೈನಲ್ಲಿರುವ ಕಚೇರಿಗೆ ಫೋನ್ ಮಾಡಿ ಬೆಂಗಳೂರು ಶಾಖಾ ಕಚೇರಿಗೆ ಬಾಂಬ್ ಇಡಲಾಗಿದೆ ಎಂದು ಅಜ್ಞಾತ ವ್ಯಕ್ತಿಗಳು ಎಚ್ಚರಿಕೆ ನೀಡಿದ್ದಾರೆ. ತಕ್ಷಣವೇ ಮುಂಬೈ ಕಚೇರಿ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿತ್ತು.