ಹುಬ್ಬಳ್ಳಿ : ಮಹದಾಯಿ ಮತ್ತು ಮೇಕೆದಾಟು ವಿಚಾರವಾಗಿ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ ಶೆಟ್ಟರ್ ಅವರೇ ಮಾತನಾಡುತ್ತಿದ್ದರು. ಇದೀಗ ಅವರದ್ದೇ ಸರ್ಕಾರವಿದೆ. ಏನು ಮಾಡುತ್ತಾರೆ ಎಂದು ನೋಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿಗೆ ಅನೇಕರು ಮೃತಪಟ್ಟಿದ್ದಾರೆ. ಬಹುತೇಕರು ಆಸ್ಪತ್ರೆಯ ಹಣ ಪಾವತಿಸಲಾಗದೆ ಕಂಗಾಲಾಗಿದ್ದಾರೆ. ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆಲ್ಲ ಮೊದಲು ಸರ್ಕಾರ ಪರಿಹಾರ ನೀಡಬೇಕು. ಈ ಕುರಿತು ಅಧಿವೇಶನದಲ್ಲಿ