ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಂಗಳ ಹಿಂದೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿದ್ದರು. ಯಡಿಯೂರಪ್ಪ ದೆಹಲಿಯಿಂದ ಬರುವಾಗ ವಿಪಕ್ಷ ನಾಯಕನ ಹೆಸರನ್ನು ಫೈನಲ್ ಮಾಡಿಕೊಂಡೇ ಬರುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಯಡಿಯೂರಪ್ಪ ಖಾಲಿ ಕೈಯಲ್ಲಿ ವಾಪಸಾಗಿದ್ರು..ಇದೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿರುವ ಬೊಮ್ಮಾಯಿ, ವಿಪಕ್ಷ ನಾಯಕನ ಆಯ್ಕೆ ಸಂಬಂಧ ಚರ್ಚೆ ನಡೆಸಿದ್ದಾರೆ ಎಂದು