ಬಳ್ಳಾರಿ : ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಡಬಲ್ ಎಂಜಿನ್ ಸರ್ಕಾರಕ್ಕೆ ಕೇವಲ ಮೂರೂವರೆ ವರ್ಷ ಆಡಳಿತ ಮಾಡುವ ಅವಕಾಶ ಸಿಕ್ಕಿದೆ. ಆದರೆ ಕಾಂಗ್ರೆಸ್ ಸರ್ಕಾರ ಇದ್ದಾಗ ಅಭಿವೃದ್ಧಿ ಬದಲಾಗಿ ಭ್ರಷ್ಟಾಚಾರಕ್ಕೆ ಆದ್ಯತೆ ನೀಡಿತ್ತು ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಕರ್ನಾಟಕ ಚುನಾವಣೆ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ ಬಿಜೆಪಿ ಆಯೋಜಿಸಿದ್ದ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು ಮೋದಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಇದ್ದಾಗ