ಬೆಂಗಳೂರು : ಖಾದಿಗೆ ಉತ್ತಮ ಭವಿಷ್ಯವಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ. ಈ ಬಾರಿಯ ಬಜೆಟ್ನಲ್ಲಿ ದುಡಿಯುವ ವರ್ಗಕ್ಕೆ ಮಹತ್ವ ಕೊಡುತ್ತಿದ್ದೇವೆ.ಖಾದಿ ಮತ್ತು ಗ್ರಾಮೋದ್ಯೋಗದಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ. ಹೀಗಾಗಿ ಬಜೆಟ್ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ವಿಶೇಷವಾದ ಒತ್ತು, ಹಣಕಾಸಿನ ನೆರವು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನದ ಉದ್ಘಾಟಿಸಿದ ಅವರು, ಮಹಾತ್ಮ