ಹುಬ್ಬಳ್ಳಿ, ಅ.16 : ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನ ಉಳಿಸಿ ಕೊಳ್ಳಲು ಆರ್ಎಸ್ಎಸ್ನ್ನು ಹೊಗಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ನಗರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಮೂಲತಃ ಆರ್ಎಸ್ಎಸ್ ಅಲ್ಲ. ಅಲ್ಲಿ ಹೋಗಿ ಸೇರಿ ಕೊಂಡಿದ್ದಾರೆ. ಸಿಎಂ ಸ್ಥಾನ ಉಳಿಸಿ ಕೊಳ್ಳಬೇಕೆಂದರೆ ಆರ್ಎಸ್ಎಸ್ ಹೊಗಳಲೇ ಬೇಕಾದ ಅನಿವಾರ್ಯತೆಯಿದೆ ಎಂದರು. ಬಿ.ಎಸ್.ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಗೌಪ್ಯವಾಗಿ ಭೇಟಿಯಾಗಿದ್ದಾರೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ