ಕಲಬುರಗಿ: ಜಿಲ್ಲೆಯ ಬೆಣ್ಣೆತೋರಾ ಜಲಾಶಯದ ಒಳ ಹರಿವು ಹೆಚ್ಚುತ್ತಿರುವ ಪರಿಣಾಮ ಜಲಾಶಯವು ಭರ್ತಿಯಾಗುತ್ತಿದ್ದು, ಹೆಚ್ಚುವರಿಯಾಗಿ ಬರುವ ನೀರನ್ನು ಕೋಡಿಯ ಬಾಗಿಲುಗಳ ಮೂಲಕ ಮುನ್ಸೂಚನೆ ಇಲ್ಲದೆ ಯಾವುದೇ ಸಮಯದಲ್ಲಿ ನದಿಗೆ ನೀರನ್ನು ಬಿಡಲಾಗುವುದರಿಂದ ನದಿಯ ಎರಡು ದಂಡೆಯಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗ-4ರ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.