ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಜುಲೈ 15ರಿಂದ ದೇಶದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ನೀಡುವುದಾಗಿ ಘೋಷಿಸಿದೆ. ಕೋವಿಡ್-19 ಬೂಸ್ಟರ್ ಡೋಸ್ ವಿತರಣೆಗೆ ಉತ್ತೇಜನ ನೀಡುವ ಉದ್ದೇಶದ ಹಿನ್ನೆಲೆ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಉಚಿತ ಬೂಸ್ಟರ್ ಡೋಸ್ ಲಸಿಕೆ ವಿತರಣೆಯ