ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ ಪ್ರಮುಖ ಪಟ್ಟಣ ನಿಪ್ಪಾಣಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು. ಪಟ್ಟಣದ ಸರ್ಕೀಟ್ ಹೌಸ್ನಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅಲೋಕ್ ಕುಮಾರ್, ಕಳೆದ ವಾರ ಕರ್ನಾಟಕ ಸಾರಿಗೆ ನಿಗಮದ ಬಸ್ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಿ ಮಸಿ ಬಳಿಯಲಾಗಿತ್ತು. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ನಡೆಯಬಾರದು ಎಂದು