ಪ್ರೀತಿಸಿದ ಹುಡುಗಿ ಜತೆ ಮದುವೆಗೆ ಆಕೆಯ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ ನೊಂದ ಭಗ್ನಪ್ರೇಮಿಯೊಬ್ಬ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕೊಪ್ಪಳದಲ್ಲಿ ಅಕ್ಟೋಬರ್ 10 ರಂದು ನಡೆದಿದ್ದು ಬಹಳ ತಡವಾಗಿ ಬೆಳಕಿಗೆ ಬಂದಿದೆ. ಮೃತ ಕಿರಣ್ ಹುಬ್ಬಳ್ಳಿಯ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಕೊಪ್ಪಳ ಜಿಲ್ಲೆ, ಗಂಗಾವತಿ ತಾಲ್ಲೂಕಿನ ಜೀರಾಳ ಕಲ್ಗುಡಿ ಗ್ರಾಮದ ನಿವಾಸಿಯಾಗಿದ್ದಾನೆ. ತನ್ನ ಸಂಬಂಧಿ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ಕಿರಣ್, ತಮ್ಮಿಬ್ಬರ ಮದುವೆಗೆ ಯುವತಿ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು