ರಾಯಚೂರು : ಕಲುಷಿತ ನೀರು ಸೇವಿಸಿ ಬಾಲಕ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. 30 ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ನೀರು ಸರಬರಾಜು ಮಾಡುವ ಪೈಪ್ ಲೈನ್ಗೆ ಚರಂಡಿ ನೀರು ಸೇರುತ್ತಿದ್ದು ಕಳೆದ 2-3 ದಿನಗಳಿಂದ ಜನರು ಅಸ್ವಸ್ಥರಾಗುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ 5 ವರ್ಷದ ಬಾಲಕ ಹನುಮೇಶ್ ಸಾವನ್ನಪ್ಪಿದ್ದಾನೆ. ಮಕ್ಕಳು, ಮಹಿಳೆಯರು ಸೇರಿ 30 ಕ್ಕೂ ಹೆಚ್ಚು