ಬೆಂಗಳೂರು : ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರ ಅಂತ್ಯೋದಯ, ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ರೇಕ್ ನೀಡಿದೆ. ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿಯನ್ನು ಅಕ್ರಮವಾಗಿ ಪಡೆದು ಬಡವರ ʼಅನ್ನಭಾಗ್ಯʼಕ್ಕೆ ಕನ್ನ ಹಾಕಿದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಆಹಾರ ಇಲಾಖೆ ಆರಂಭಿಸಿತ್ತು. ಅನರ್ಹ ಪಡಿತರ ಚೀಟಿಗಳನ್ನು ಎಪಿಎಲ್ಗೆ ಪರಿವರ್ತಿಸುವ ಪ್ರಕ್ರಿಯೆ ನಡೆಸಿತ್ತು. ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, 3