ರಾಜ್ಯದ ಕರಾವಳಿಯಲ್ಲಿ ಈ ಬಾರಿ ಅತಿವೃಷ್ಠಿಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗ ಬಂದಿದೆ. ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ. ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಧಾವಿಸುತ್ತಾ ಎಂಬುದನ್ನು ಬೆಳೆಗಾರರು ಕಾಯುವಂತಾಗಿದೆ.ರಾಜ್ಯದ ಕರಾವಳಿಯಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರಗೊಂಡಿತ್ತು. ಆಗಸ್ಟ್ ಹಾಗೂ ಸೆಪ್ಟಂಬರ್ ನಲ್ಲಿ ಸುರಿದ ಮಳೆಗೆ ಅಡಿಕೆ ಮರಕ್ಕೆ ಕೊಳೆ ರೋಗ ತಗುಲಿದೆ. ಇದರಿಂದಾಗಿ ಅಡಿಕೆ ಬೆಳೆಗಾರರಿಗೆ ಭಾರೀ ನಷ್ಟ ಉಂಟಾಗಿದೆ. ಕರಾವಳಿಯಲ್ಲಿ ಸುಮಾರು 50 ಸಾವಿರಕ್ಕೂ