ಲಿಂಗಾಯತ ಪ್ರತ್ಯೇಕ ಧರ್ಮದ ಪರ-ವಿರೋಧದ ಮಧ್ಯೆಯೇ ಇವತ್ತು ಕಲಬುರಗಿಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಬೃಹತ್ ಸಮಾವೇಶ ನಡೆಯುತ್ತಿದೆ. ಸಮಾವೇಶವನ್ನ ಯಶಸ್ವಿಗೊಳಿಸಲು ಜಲಸಂಪನ್ಮೂಲ ಸಚಿವ ೆಂ.ಬಿ. ಪಾಟೀಲ್ ಸ್ವತಃ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಸಮಾವೇಶದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಪ್ರತ್ಯೇಕ ಧರ್ಮದ ಬ್ಯಾನರ್`ಗಳು ರಾರಾಜಿಸುತ್ತಿದ್ದು, ಲಿಂಗಾಯತ ಪ್ರತ್ಯೇಕ ಧರ್ಮ ಬೆಂಬಲಿಸುವ ಮಠಾಧೀಶರು, ರಾಜಕಾರಣಗಳು ಭಾಗವಹಿಸಲಿದ್ದಾರೆ. 5 ಲಕ್ಷಕ್ಕೂ ಅಧಿಕ ಮಂದಿ ಸಮಾವೇಶಕ್ಕೆ ಸೇರುವ ನಿರೀಕ್ಷೆ ಇದೆ. ನಗರದ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್