ಮೈತ್ರಿ ಸರ್ಕಾರ ಕೇವಲ ವರ್ಗಾವಣೆ ದಂಧೆಗೆ ಸೀಮಿತವಾಗಿದ್ದು ಜನರ, ರೈತರ ಹಿತ ಮರೆತಿದೆ ಇದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಮಾಡುತ್ತೇವೆ ಎಂದು ಬೊಬ್ಬೆ ಹೊಡೆದರು. ನಾಲ್ಕು ವರ್ಷದಲ್ಲಿ ನಾಲ್ಕು ಕಂತುಗಳಲ್ಲಿ ಸಾಲ ತಿರಿಸುತ್ತೇವೆ ಅಂದ್ರೆ ಯಾರು ಕಾಯ್ತಾರೆ? ಹಣ ತುಂಬದೆ ಸಹಕಾರಿ ಕ್ಷೇತ್ರವು ದಿವಾಳಿ ಸ್ಥಿತಿಗೆ ಬಂದಿದೆ. ರಾಷ್ಟ್ರೀಕೃತ ಬ್ಯಾಂಕ್