ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದ ಬಿಜೆಪಿಗೆ ಅದರಲ್ಲೂ ಬಿ.ಎಸ್.ಯಡಿಯೂರಪ್ಪಗೆ ಈಗ ಭಾರೀ ಮುಖಭಂಗವಾಗಿದೆ.ಬಿಜೆಪಿ ಪಕ್ಷ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮುಗ್ಗರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸ್ವಕ್ಷೇತ್ರದಲ್ಲಿಯೇ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ ಮೈತ್ರಿ ಅಧಿಕಾರದ ಗದ್ದುಗೆ ಹಿಡಿದಿದೆ. ಶಿಕಾರಿಪುರ ಪುರಸಭೆಯ 23 ಸ್ಥಾನಗಲ್ಲಿ ಕಾಂಗ್ರೇಸ್ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 8 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಮೂರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.ಶಿರಾಳಕೊಪ್ಪ ಕೂಡ ಕಾಂಗ್ರೇಸ್ ಮೈತ್ರಿ ಪಾಲಾಗಿದೆ.