ಚಿಕ್ಕಬಳ್ಳಾಪುರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪಗೆ ವಯಸ್ಸಾಗಿದೆ. ಮೊದಲು ಇದ್ದ ಹಾಗೆ ಹುರುಪು, ಉತ್ಸಾಹ ತಿರುಗಾಟ ಇಲ್ಲ. ಬಿಎಸ್ ವೈ ಫೇಸ್ ವ್ಯಾಲು ಕಡಿಮೆಯಾಗಿದೆ ಎಂದು ತೋಟಗಾರಿಕಾ ಸಚಿವ ಎಂ.ಸಿ ಮನಗೂಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10-12 ಜನ ಶಾಸಕರನ್ನು ಸೆಳೆದು ಆಪರೇಷನ್ ಕಮಲ ಮಾಡಿ ಸಮ್ಮಿಶ್ರ ಸರ್ಕಾರ ಉರುಳಿಸಲು ಯಡಿಯೂರಪ್ಪ ಪ್ರಯತ್ನಿಸಿದ್ದರು. ಆದರೆ ಬಿಜೆಪಿಯವರು ಕರೆದರೆ ಕಾಂಗ್ರೆಸ್ ನವರು, ಜೆಡಿಎಸ್ ನವರು ಯಾರು ಹೋಗಲಿಲ್ಲ ಎಂದರು.