ಮಂಗಳೂರು: ಆಂಬಿಡೆಂಟ್ ಕಂಪನಿಯ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಗಣಿ ದಣಿ ಜನಾರ್ಧನ ರೆಡ್ಡಿ ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಲೆ ಬೀಸುತ್ತಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.ಜನಾರ್ಧನ ರೆಡ್ಡಿ ಈಗ ನಮ್ಮ ಪಕ್ಷದಲ್ಲಿಲ್ಲ. ಹಾಗಿರುವಾಗ ನಾವು ಯಾಕೆ ವಿಪಕ್ಷದವರ ಕೈವಾಡ ಎಂದೆಲ್ಲಾ ದೂರೋಣ? ಅಕ್ರಮ ನಡೆಸಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ