ಬೆಂಗಳೂರು: ದೇಶದ ವಿವಿಧೆಡೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಕೃತ್ಯಗಳ ಬಗ್ಗೆ ಕೇಂದ್ರ ಸರ್ಕಾರವನ್ನು ದೂಷಿಸುತ್ತಿರುವ ಕಾಂಗ್ರೆಸ್ ನಡೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರಶ್ನಿಸಿದ್ದಾರೆ.ಸಿದ್ದರಾಮಯ್ಯನವರೇ ನಿಮ್ಮ ಪಕ್ಷ ದೇಶದ ವಿವಿಧೆಡೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಕೃತ್ಯಗಳ ಬಗ್ಗೆ ಪ್ರಶ್ನೆ ಮಾಡುತ್ತಿದೆ. ಆದರೆ ನಿಮ್ಮದೇ ಆಡಳಿತದ ಸರ್ಕಾರವಿರುವ ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಶೇ. 11 ರಷ್ಟು ಹೆಚ್ಚಾಗಿವೆ. ಇದರ ಬಗ್ಗೆ ನೀವೇಕೆ ಮೌನ ವಹಿಸಿದ್ದೀರಿ? ಎಂದು ಬಿಎಸ್