ಬೆಂಗಳೂರು: ನವದೆಹಲಿಯಲ್ಲಿ ಇಂದು ಮತ್ತು ನಾಳೆ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮರಳಿ ತವರಿಗೆ ಬರುತ್ತಿದ್ದಾರೆ.ಕಾರ್ಯಕಾರಿಣಿಯ ನಡುವೆಯೂ ಬಿಎಸ್ ವೈ ದಿಡೀರ್ ಆಗಿ ಬೆಂಗಳೂರಿಗೆ ವಾಪಸ್ ಆಗುತ್ತಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಕೆಲವು ಮೂಲಗಳ ಪ್ರಕಾರ ಬಿಎಸ್ ವೈ ಸ್ವಾಮೀಜಿಯೊಬ್ಬರನ್ನು ಭೇಟಿಯಾಗಲು ಬೆಂಗಳೂರಿಗೆ ಬರುತ್ತಿದ್ದು, ಭೇಟಿ ಬಳಿಕ ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.ಇನ್ನು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ