ಬೆಂಗಳೂರು: ಕಾಂಗ್ರೆಸ್ ತೊರೆದು ನಿನ್ನೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಬೆಂಗಳೂರಿಗೆ ಬಂದ ಮೇಲೆ ಅದ್ಧೂರಿಯಾಗಿ ಬರಮಾಡಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಸದ್ಯದಲ್ಲೇ ನಡೆಯಲಿರುವ ಉಪ ಚುನಾವಣೆ ಪ್ರಚಾರಕ್ಕೂ ಅವರನ್ನು ಕರೆತರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನಿನ್ನೆ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಎಸ್ ಎಂ ಕೃಷ್ಣ ಇಂದು ಪ್ರಧಾನಿ