ಬೆಂಗಳೂರು: ಇತ್ತೀಚೆಗೆ ನಡೆದ ಉಪ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬದಲಾವಣೆಗೆ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿತ್ತು.ಆದರೆ ಇದೀಗ ಹೈಕಮಾಂಡ್ ಮನಸ್ಸು ಬದಲಾಯಿಸಿದ್ದು, ಬಿಎಸ್ ವೈ ಬೀಸುವ ಕತ್ತಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ವೈಫಲ್ಯ ಬಳಿಕ ರಾಜ್ಯಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಹೊಸ ನಾಯಕನನ್ನು ಆಯ್ಕೆ ಮಾಡಬಹುದು ಎಂಬ ಗುಸು ಗುಸು