ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ ಮಾಡಬಾರದ ತಪ್ಪುಗಳನ್ನು ಮಾಡಿ ಈಗ ಪಶ್ಚಾತ್ತಾಪ ಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಸಾಗುತ್ತಿರುವುದು ಬಿಜೆಪಿಯ ನವಕರ್ನಾಟಕ ಪರಿವರ್ತನಾ ಯಾತ್ರೆ ಯಲ್ಲ. ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆಯ ಪಶ್ಚಾತ್ತಾಪದ ಯಾತ್ರೆ ಎಂದು ವ್ಯಂಗ್ಯವಾಡಿದರು. ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಿದಲ್ಲಿ ಕೇಂದ್ರ ಸರಕಾರದಿಂದ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ