ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿ, ಕುತಂತ್ರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಪ್ರಹ್ಲಾದ್ ಜೋಷಿ ಸಂಸದ ಸ್ಥಾನಕ್ಕೆ ಹಾಗೂ ಜಗದೀಶ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಪ್ರಹ್ಲಾದ್ ಜೋಷಿ ಅವರು ರಾಜ್ಯದ ಜನರಿಗೆ ಮೋಸ ಮಾಡಲು ಕುತಂತ್ರ ನಡೆಸಿದರೆ, ಜಗದೀಶ ಶೆಟ್ಟರ್ ಅವರು ಸಹಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ನಾಯಕರಿಗೆ