ಬೆಂಗಳೂರಿನ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಎನ್. ಮಹೇಶ್ ಬಿಜೆಪಿಗೆ ಸೇರ್ಪಡೆಯಾದರು. ಮಹೇಶ್ ಅವರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಹೇಶ್ ಚಳುವಳಿಯ ಹಿನ್ನೆಲೆಯಿಂದ ಬಂದವರು. ಅವರ ಸಂಘಟನಾ ಶಕ್ತಿ ಬಹು ದೊಡ್ಡದು. ಅವರು ಶಾಸಕರಾಗುವ