ಬೆಂಗಳೂರು: ಇಂದು ರಾಜ್ಯಾದ್ಯಂತ ಮತದಾನ ನಡೆಯಲಿದ್ದು, ಅದಕ್ಕೂ ಕೆಲವೇ ಗಂಟೆಗಳ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಟ್ವಿಟರ್ ನಲ್ಲಿ ವಿಶೇಷ ಸಂದೇಶ ಬರೆದುಕೊಂಡಿದ್ದಾರೆ.ಪ್ರತಿಯೊಬ್ಬರೂ ವೋಟ್ ಮಾಡಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ. ವೋಟ್ ಮಾಡುವಾಗ ಕಳೆದ 5 ವರ್ಷಗಳಲ್ಲಿ ಕರ್ನಾಟಕ ಕಂಡ ಗಣನೀಯ ಅಭಿವೃದ್ಧಿಯನ್ನು ಮರೆಯಬೇಡಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜನತೆಗೆ ಸುದೀರ್ಘ ಪತ್ರವನ್ನೇ ಬರೆದು ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ