ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ಎಲ್ಲಿಂದ ಸ್ಪರ್ಧಿಸಬೇಕು ಎನ್ನುವ ಬಗ್ಗೆ ಗೊಂದಲದಲಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿಲ್ಲ. ಶಿವಮೊಗ್ಗ ಅವರ ಸ್ವಂತ ಜಿಲ್ಲೆ. ಪ್ರೀತಿಯಿಂದ ಅವರನ್ನು ಬೆಳೆಸಿದ ಜಿಲ್ಲೆಯಾಗಿದ್ದರಿಂದ ಶಿವಮೊಗ್ಗ ಕ್ಷೇತ್ರವನ್ನು ಬಿಡಲು ಅವರಿಗೆ ಮನಸ್ಸಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲಿ ಯಡಿಯೂರಪ್ಪ ಸ್ಪರ್ಧಿಸಿದರೂ ಮತದಾರರು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸವಿದೆ. ಮುಂಬರುವ ವಿಧಾನಸಭೆ