ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶವು ತೃಪ್ತಿದಾಯಕವಾಗಿದ್ದು, ಮೊದಲ ಬಾರಿಗೆ ಬೆಳಗಾವಿಯಲ್ಲಿ ಸ್ಪಷ್ಟ ಬಹುಮತದಿಂದ ಬಿ.ಜೆ.ಪಿ. ಅಧಿಕಾರಕ್ಕೆ ಬಂದಿದ್ದು, ಇದೊಂದು ಐತಿಹಾಸಿಕ ಗೆಲುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸಂಸದರು, ಶಾಸಕರ ಹಾಗೂ ವಿಧಾನಪರಿಷತ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಪುನಃ. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಅವರು ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ