ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ನಾಯಕರು. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬಿಜೆಪಿ ಭಿನ್ನಾಭಿಪ್ರಾಯವಿಲ್ಲ ಎಲ್ಲಾ ಸರಿ ಹೋಗಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಮ್ಮ ನಾಯಕರು, ಪಕ್ಷದಲ್ಲಿ ಹಲವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಹೊರತು ಭಿನ್ನಾಭಿಪ್ರಾಯವಿಲ್ಲ. ಏನೇ ಇದ್ದರೂ ಎಲ್ಲವೂ ಸರಿ ಹೋಗಲಿದೆ ಎಂದಿದ್ದಾರೆ.ಸಚಿವ ಸ್ಥಾನ ಆಕಾಂಕ್ಷಿ ಆಗಿರುವ ಉಮೇಶ್ ಕತ್ತಿ ಅವರು ಉತ್ತರ ಕರ್ನಾಟಕದ ಕೆಲವು ಶಾಸಕರಿಗೆ ಊಟಕ್ಕೆ ಕರೆದಿದ್ದು ನಿಜ. ಸಹಜವಾಗಿ ರಾಜಕೀಯ ಚರ್ಚೆ ಆಗಿರುತ್ತೆ.