ಮುಂಬರುವ ಚುನಾವಣೆಯಲ್ಲಿ ಗೆದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗ್ತಾರೆ ಅಂತ ನಾಗಾಸಾಧುಗಳು ಭವಿಷ್ಯ ನುಡಿದಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. ರಾಮೇಶ್ವರಂಗೆ ತೆರಳುವ ಮುನ್ನ ಬಿಜೆಪಿ ನಾಯಕರ ಮನೆಗಳಿಗೆ ಭೇಟಿ ನೀಡಿರುವ ನಾಗಾಸಾಧುಗಳು, ಯಡಿಯೂರಪ್ಪ ಮುಂದೆ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾಗಿ ಬಿಜೆಪಿ ಮುಖಂಡರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಾಗಾಸಾಧುಗಳು ಮಾತು ಯಾವತ್ತೂ ಸತ್ಯವಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ