ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ದಲಿತ ಕುಟುಂಬದವರಿಗೆ ವಿಶೇಷ ಭೋಜನಕೂಟ ಏರ್ಪಡಿಸಿದ್ದರು.ಬಿಜೆಪಿಯ ಜನ ಸಂಪರ್ಕ ಅಭಿಯಾನದ ಸಂದರ್ಭದಲ್ಲಿ ತಮಗೆ ಆತಿಥ್ಯ ನೀಡಿದ್ದ 33 ದಲಿತ ಕುಟುಂಬಗಳನ್ನ ಆಹ್ವಾನಿಸಿದ್ದ ಬಿಎಸ್ ವೈ, ಎಲ್ಲರನ್ನೂ ಪ್ರೀತಿಯಿಂದ ಸ್ವಾಗತಿಸಿದರು. ಹೋಳಿಗೆ ಊಟದೊಂದಿಗೆ ಔತಣಕೂಟದಲ್ಲಿ 18 ಬಗೆಯ ಸಾಂಪ್ರದಾಯಿಕ ಖಾದ್ಯ ಬಡಿಸಲಾಯಿತು. ಖುದ್ದು ಬಿಎಸ್ ವೈ ಊಟ ಬಡಿಸಿದ್ದು ವಿಶೇಷವಾಗಿತ್ತು. ಇದೇ ವೇಳೆ ಆಗಮಿಸಿದ್ದ