ದಲಿತ ಕುಟುಂಬಗಳ ಸಮಸ್ಯೆಗಳನ್ನು ಅರಿಯಲು ರಾಜ್ಯ ಪ್ರವಾಸ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ದಲಿತ ಕುಟುಂಬಗಳಿಗಾಗಿ ಭೋಜನ ಕೂಟ ಏರ್ಪಡಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಕಳೆದ ಮೇ 18 ರಿಂದ ಜೂನ್ 29 ರವರೆಗೆ 27 ಜಿಲ್ಲೆಗಳ 81 ವಿಧಾನಸಭಾ ಕ್ಷೇತ್ರಗಳನ್ನು ಭೇಟಿ ಮಾಡಿದ್ದರು. ಆ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರು ಮತ್ತು ಸ್ಥಳೀಯ ಮುಖಂಡರೊಂದಿಗೆ ದಲಿತರ ಮನೆಯಲ್ಲಿ ತಿಂಡಿ ಸೇವನೆ ಮಾಡಿದ್ದರು.