ನಾಳೆ ನಡೆಯಲಿರುವ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಅತೃಪ್ತ ನಾಯಕರಿಗೆ ತಿರುಗೇಟು ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಕಾರ್ಯಕಾರಿಣಿ ಸಭೆಗೆ ಹಿರಿಯ ನಾಯಕರು ಆಗಮಿಸಲಿದ್ದು, ನಾಳಿಯ ಅಧ್ಯಕ್ಷೀಯ ಭಾಷಣದಲ್ಲಿ ಅವರ ಎದುರಿಗೆ ಬಂಡಾಯ ನಾಯಕರ ಬಂಡವಾಳ ಬಯಲು ಮಾಡಲು ರಣತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿ ಉದ್ಭವಾಗಿರುವ ಭಿನ್ನಮತ ಕುರಿತಂತೆ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಎದುರಾಗಿರುವ ಗೊಂದಲಗಳಿಗೆ ತೆರೆ ಎಳೆಯಲಿದ್ದಾರೆ ಎಂದು ಬಿಎಸ್ವೈ