ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ವಿಚಾರದಲ್ಲಿ ಮಧ್ಯಪ್ರವೇಶಿಸಿರುವ ಮಠಾಧೀಶರೇನು ಸೂ ಪರ್ ಹೈಕಮಾಂಡಾ ಎಂದು ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಶ್ರೀನಿವಾಸ್ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿನ ಹೈಕಮಾಂಡ್ ಮತ್ತು ಬಿಎಸ್ ವೈ ನಡುವಿನ ವಿಚಾರದಲ್ಲಿ ಮೂರನೇಯವರು ಮಾತನಾಡಬಾರದು ಎಂದರು. ಸ್ವಾಮೀಜಿಗಳು ಯಡಿಯೂರಪ್ಪ ಅವರೇ ಮುಂದುವರೆಯಬೇಕೆಂದು ಹೇಳುತ್ತಿದ್ದಾರೆ. ಸ್ವಾಮೀಜಿಗಳೇನು ಸೂಪರ್ ಹೈಕಮಾಂಡಾ? ಅವರು ಯಾಕೆ ಈ ವಿಷಯದಲ್ಲಿ ಮೂಗು ತೂರಿಸುತ್ತಿದ್ದಾರೆ