ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ಜಾಲಹಳ್ಳಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂಭ್ರಮಾಚರಣೆ ನಡೆದಿದ್ದು ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಕೇಕೆ ಹಾಕಿ ಸಂಭ್ರಮಿಸಿದ್ದಾರೆ. ಹೆಚ್ಡಿ ಕುಮಾರಸ್ವಾಮಿ ಸಿಎಂ ಗಾದಿ ಏರುವುದು ಖಚಿತವಾಗ್ತಿದ್ದಂತೆ ಗದಗನಲ್ಲಿ ಜೆಡಿಎಸ್ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತು. ಗದಗ ನಗರದ ಗಾಂಧಿ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ರು. ರೈತಪರ ಸರ್ಕಾರ