ಬೆಂಗಳೂರು(ಜು.16): ಸಮಾಜ ಸುಧಾರಕ ಜಗಜ್ಯೋತಿ ಬಸವೇಶ್ವರರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ವಿಧಾನಸೌಧಕ್ಕೆ ಕೂಗಳತೆ ದೂರದಲ್ಲಿ ಬಸವೇಶ್ವರರ ಅಶ್ವಾರೂಢ ಪ್ರತಿಮೆ ಇರುವುದರಿಂದ ವಚನ ಬರೆಯುವ ಭಂಗಿ ಸೇರಿ ಇತರ ಭಂಗಿಗಳಲ್ಲಿನ ಪ್ರತಿಮೆ ಸ್ಥಾಪಿಸುವ ಬಗ್ಗೆ ಚಿಂತನೆ ನಡೆದಿದೆ. * ವಿಧಾನಸೌಧದಲ್ಲಿ ಬಸವೇಶ್ವರ ಪ್ರತಿಮೆಗೆ ಸಂಪುಟ ಅನುಮತಿ * ವಚನ ಬರೆವ ಭಂಗಿಯಲ್ಲಿ ನಿರ್ಮಾಣಕ್ಕೆ ಚಿಂತನೆ * ಬಿಎಸ್ವೈ ಕನಸಿನ