ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿದ ಬಳಿಕವೂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಪ್ರಚಾರ ಕಾರ್ಯ ಮುಂದುವರಿಸಿದ್ದಾರೆ.ವರುಣಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದಾಗ ನಾಲ್ಕು ದಿನಗಳ ಕಾಲ ವಿಜಯೇಂದ್ರ ಪ್ರಚಾರ ಕಣದಿಂದ ದೂರವುಳಿದಿದ್ದರು. ಇದೀಗ ಮತ್ತೆ ಬಿಜೆಪಿ ಪರ ಮತಯಾಚನೆ ನಡೆಸುತ್ತಿದ್ದಾರೆ.ಆದರೆ ವರುಣಾದಲ್ಲಿ ಅಲ್ಲ. ಚಾಮರಾಜನಾಗರ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವೇಳೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿಲ್ಲ ಎಂದೂ ಹೇಳಿಕೊಂಡಿದ್ದಾರೆ.ತಾಜಾ ಸುದ್ದಿಗಳನ್ನು