ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಶೀಘ್ರದಲ್ಲಿ ಸರಕಾರದ ಭ್ರಷ್ಟಾಚಾರ ವಿರುದ್ಧದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದಾಖಲಾತಿಗಳನ್ನು ಕೇಳಿದ್ರೆ ಸರಕಾರಿ ಅಧಿಕಾರಿಗಳು ದಾಖಲೆಗಳು ಕೊಡುತ್ತಿಲ್ಲ. ಆರ್ಟಿಐ ಅಡಿ ಅರ್ಜಿ ಸಲ್ಲಿಸಿ ಕೋರಿದರೂ ಸರಕಾರಿ ಅಧಿಕಾರಿಗಳು ಯಾವುದೇ ದಾಖಲೆಗಳನ್ನು ಕೊಡುತ್ತಿಲ್ಲ ಎಂದು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎನ್ನುವ ಆರೋಪಗಳಉ ಕೇಳಿಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಗಳಿಗೆ ಸ್ಪಷ್ಟನೆ ನೀಡಬೇಕು