ಬೆಂಗಳೂರು : ಮುಖ್ಯಮಂತ್ರಿಗಳು ವಿಶ್ವಾಸಮತ ಯಾಚನೆ ಮಾಡುತ್ತೇನೆ ಎಂದು ಹೇಳಿರುವುದರ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿಶ್ವಾಸಮತ ಯಾಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದು ರಾಜೀನಾಮೆ ನೀಡಿದ ಅತೃಪ್ತ ಶಾಸಕರನ್ನು ತಡೆಯಲು ಹಾಗೂ ಉಳಿದ ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಹೋಗುವುದನ್ನು ತಡೆಯಲು ಮಾಡಿರುವ ರಾಜಕೀಯ ಷಡ್ಯಂತ್ರ ಎಂದು ಹರಿಹಾಯ್ದಿದ್ದಾರೆ. ಸರ್ಕಾರಕ್ಕೆ ಯಾವುದೇ ಕಾರಣಕ್ಕೂ ಬಹುಮತ