ಸಿಎಂ ಸಿದ್ದರಾಮಯ್ಯನವರೇ ನಾಲಿಗೆ ಬಿಗಿ ಹಿಡಿದು ಮಾತನಾಡಿ. ನಿಮ್ಮ ಸೊಕ್ಕಿಗೂ ಇತಿ ಮಿತಿ ಇರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಾಕೀತು ಮಾಡಿದ್ದಾರೆ. ನವಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಆಯೋಜಿಸಲಾದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಮನಬಂದಂತೆ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು. ಬಿಬಿಎಂಪಿ ಕಾರ್ನರ್ಸೈಟ್ ಅಡವಿಟ್ಟು 950 ಕೋಟಿ ರೂಪಾಯಿ ಸಾಲ ಮಾಡಿದೆ.