ಶಿವಮೊಗ್ಗ : ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೆಸರಿಡುವ ಘೋಷಣೆ ಕೇಳಿಬಂದ ಬೆನ್ನಲ್ಲೇ ತಮ್ಮ ಹೆಸರು ಇಡುವುದು ಬೇಡವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ ಬಹುದಿನದ ಕನಸಾದ ವಿಮಾನ ನಿಲ್ದಾಣ ಸ್ಥಾಪನೆ ನನಸಾಗುತ್ತಿದೆ. ಇಲ್ಲಿನ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದೀರಿ ಇದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ. ಈ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು