ಸಿಲಿಕಾನ್ ಸಿಟಿಯಲ್ಲಿ ಪುಂಡರ ವ್ಹೀಲಿಂಗ್ ಹಾವಳಿ ಮಿತಿ ಮೀರುತ್ತಿದ್ದು, ತಮ್ಮ ಸಾಹಸವನ್ನು ಸೋಶಿಯಲ್ ಮೀಡಿಯಾದಲ್ಲೂ ಭರ್ಜರಿಯಾಗಿ ಅಪ್ಲೋಡ್ ಮಾಡುತ್ತಿದ್ದಾರೆ. ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಇವರ ಹಾವಳಿ ಹೆಚ್ಚುತ್ತಿದೆ.ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಿ ಸಿಕ್ಕಸಿಕ್ಕ ರೋಡ್ಗಳಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುವ ಚಟ ಹಲವು ಯುವಕರಲ್ಲಿ ಕಂಡುಬರುತ್ತಿದೆ. ರಿಂಗ್ ರೋಡ್, ಹೈವೇ, ಸಿಟಿ ಸೆಂಟರ್ ರೋಡ್ಗಳಲ್ಲಿ ಭಯಾನಕ ವ್ಹೀಲಿಂಗ್ ಕಂಡುಬರುತ್ತಿದೆ. ಡ್ರ್ಯಾಗ್ ರೇಸ್, ವ್ಹೀಲಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎನ್ನುವ ಪೊಲೀಸರಿಗೆ