ಬೆಂಗಳೂರು : ಕರ್ನಾಟಕದ ಭದ್ರಾ ಮೇಲ್ಡಂಡೆ ಯೋಜನೆಗೆ ಕೇಂದ್ರದ ಬಜೆಟ್ನಲ್ಲಿ ಬಂಪರ್ ಕೊಡುಗೆ ಸಿಕ್ಕಿದೆ. ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದರ ಜೊತೆಗೆ 5,300 ಕೋಟಿಯನ್ನು ಬಂಪರ್ ಗಿಫ್ಟ್ ಕೊಟ್ಟಿದೆ ಮೋದಿ ಸರ್ಕಾರ.ಭದ್ರಾ ಮೇಲ್ಡಂಡೆ ಯೋಜನೆಯಿಂದ ನಾಲ್ಕು ಜಿಲ್ಲೆಗಳ ಜನರಿಗೆ ಅನುಕೂಲ ಆಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಬಹುದಾಗಿದೆ.ಒಟ್ಟು ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ 367 ಕೆರೆಗಳಿಗೆ ನೀರನ್ನು