ಚಿನ್ನದ ಬೆಲೆ ಎನಿಸಿಕೊಂಡಿರೋ ಟೊಮೆಟೊವನ್ನು ಭರ್ಜರಿಯಾಗಿ ಬೆಳೆದು ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಲಕ್ಷಾಂತರ ರೂ. ಆದಾಯ ಗಳಿಸಿದ್ದಾರೆ. ಬೇಲೂರು ತಾಲೂಕಿನ ಹಳೆಬೀಡು ಹೋಬಳಿ ಬಸ್ತಿಹಳ್ಳಿ ಗ್ರಾಮದ ಬೈರೇಶ್ ಟೊಮೆಟೊ ಬೆಳೆ ಬೆಳೆದಿದ್ದಾರೆ.. ಬೈರೇಶ್ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದಾರೆ. ಇವರು ಒಂದು ಎಕರೆ 6 ಗುಂಟೆ ಜಾಗದಲ್ಲಿ ಟೊಮೆಟೊ ಬೆಳೆದಿದ್ದು, ಈಗಾಗಲೇ 20 ಲಕ್ಷ ರೂ. ಆದಾಯ ಗಳಿಸಿದ್ದಾರೆ. ಬೈರೇಶ್ ಇತ್ತೀಚೆಗೆ ಸಾವಿರ ಬಾಕ್ಸ್ ಟೊಮೆಟೊ ಮಾರಾಟ