ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಕೈಗೊಂಡಿರುವ ಮುಷ್ಕರ ಇಂದು ಸಹ ಮುಂದುವರೆದಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಸರ್ಕಾರಿ ಬಸ್ಗಳ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಗಳು ಪ್ರಯಾಣಿಕರು ಇಲ್ಲದೆ ಬಿಕೋ ಎನ್ನುತ್ತಿದೆ. ರಾಜ್ಯದ್ಯಂತ ಸಾರಿಗೆ ನೌಕರರು ನೀಡಿರುವ ಮುಷ್ಕರ ಕರೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಸ್ ನಿಲ್ದಾಣಗಳಲ್ಲಿ 144 ಸೆಕ್ಸೆನ್